ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ನಗರದ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಸಮಾಜದ ಮುಖಂಡರು ಮಾತನಾಡಿ, ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಶ್ರೀ ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಆಯೋಜಿಸಲಾಗಿದೆ. ಎರಡು ವರ್ಷದ ಹಿಂದೆ ಬೆಂಗಳೂರಿನಲ್ಲಿ ಸಮಾವೇಶ ನಡೆದಿದ್ದು, ಒಂಭತ್ತು ಲಕ್ಷ ಜನ ಸೇರಿದ್ದೆವು. ಈ ದಿನವನ್ನು ಸಮಾಜದ ಬಂಧುಗಳು ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಜನರು ಒಟ್ಟುಗೂಡಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಬೇಕೆಂದು ಆಶಿಸಿದರು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ್, ಮಹಾದೇವ, ವಿಷಕಂಠ, ಮಹಾದೇವಪ್ಪ, ಕರಿಯಪ್ಪ, ಮಹಾದೇವಿ, ರೇವಣ್ಣಸಿದ್ಧಪ್ಪ, ಬಸವರಾಜಪ್ಪ, ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು.