ELECTION NEWS…

ದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗವು ಇಂದು ಪತ್ರಿಕಾಗೋಷ್ಠಿ ನಡೆಸಿದರು.ಕರ್ನಾಟಕ ವಿಧಾನಸಭೆ 2023 ದಿನಾಂಕ ಮೇ 10ರಂದು ಪ್ರಕಟಿಸಿದ್ದಾರೆ. ಫಲಿತಾಂಶವು 13ರಂದು ಪ್ರಕಾಶ ಗೊಳ್ಳಲಿದೆ ಎಂದು ಚುನಾವಣೆ ಅಧಿಕಾರಿ ಘೋಷಣೆ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10 ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ.

ಎಣಿಕೆ ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ 5.21 ಕೋಟಿ ಮತದಾರರಿದ್ದಾರೆ. 2.62 ಕೋಟಿ ಪುರುಷ ಮತದಾರರು, 2.59 ಕೋಟಿ ಮಹಿಳಾ ಮತದಾರರಿದ್ದಾರೆ. 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.

ಒಟ್ಟು 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ನಗರ ಪ್ರದೇಶದಲ್ಲಿ 24,043 ಮತಗಟ್ಟೆಗಳು, ಗ್ರಾಮೀಣ ಭಾಗದಲ್ಲಿ 34,219 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. 1,320 ಮತಗಟ್ಟೆಗಳನ್ನು ಮಹಿಳೆಯರೆ ಸಂಪೂರ್ಣವಾಗಿ ನಿರ್ವಹಿಸಲಿದ್ದಾರೆ.

ವರದಿ ಪ್ರಜಾ ಶಕ್ತಿ…