ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ ದಿ 02-04-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನು ರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2ನೇ ತಾರೀಕಿನಂದು ಪೊಲೀಸ್‌ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ.ಈ ದಿನದಂದು ಪೊಲೀಸ್‌ ಇಲಾಖೆಯಲ್ಲಿ ನಿವೃತ್ತರಾದ ಅಧಿಕಾರಿ/ಸಿಬ್ಬಂದಿಯವರು ತಮ್ಮ ಸೇವಾವಧಿಯಲ್ಲಿ ನಿರ್ವಹಿಸಿದ ಸೇವೆಯನ್ನು ಸ್ಮರಿಸಲಾಗುತ್ತದೆ.

ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಿದರು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಿಥುನ್ ಕುಮಾರ್. ಜಿ. ಕೆ. ಐಪಿಎಸ್, ಮಾನ್ಯ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆಯವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ದಾನಂ ನಿವೃತ್ತ ಎಸ್ಐ ರವರು ಆಗಮಿಸಿ, ಪೊಲೀಸ್ ತುಕಡಿಗಳಿಂದ ಗೌರವ ವಂದನೆಗಳನ್ನು ಸ್ವೀಕರಿಸಿದರು. ಶ್ರೀ ಶಿವಾನಂದ ಗುಣದಾಳ್, ಆರ್. ಪಿ. ಐ ರವರು ಪೆರೇಡ್ ಕಮಾಂಡರ್ ಆಗಿ ನೇತೃತ್ವವನ್ನು ವಹಿಸಿದ್ದರು.

ದಿನಾಂಕ: 01-04-2022 ರಿಂದ ದಿನಾಂಕ: 31-03-2023 ರವರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಕರ್ತವ್ಯ ನಿರ್ವಹಿಸಿದ ಒಟ್ಟು 24 ಜನ ಎಎಸ್‌ಐ, 05 ಜನ ಎ.ಆರ್.ಎಸ್.ಐ, 03 ಜನ ಸಿಹೆಚ್‌ಸಿ, 02 ಜನ ಎಹೆಚ್‌ಸಿ ಮತ್ತು 1 ಸಿಪಿಸಿ ಸೇರಿದಂತೆ ಒಟ್ಟು 35 ಜನ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ನಿವೃತ್ತಿ ಹೊಂದಿದ್ದು, ಇವರುಗಳ ಸೇವೆಯನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಪೋಲಿಸ್ ಉಪಾಧೀಕ್ಷಕರುಗಳು, ಪೋಲಿಸ್ ವೃತ್ತ ನಿರೀಕ್ಷಕರು / ಪೋಲಿಸ್ ನಿರೀಕ್ಷಕರು, ಪೋಲಿಸ್ ಉಪ ನಿರೀಕ್ಷಕರು, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕುಟುಂಬ ವರ್ಗದವರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ…