ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ, ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.

1) ದಿನಾಂಕಃ 04-04-2023 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 7,00,000/- ಗಳ ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

2) ದಿನಾಂಕಃ 04-04-2023 ರಂದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ ರೂ 1,40,000/- ಮೌಲ್ಯದ ಒಟ್ಟು 50 ಗ್ಯಾಸ್ ಸ್ಟವ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವರದಿ ಪ್ರಜಾ ಶಕ್ತಿ…