ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು.

ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.
ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಪ್ರಕರಣಗಳನ್ನು ದಾಖಲಿಸುವಂತೆ ಸೂಚನೆ ನೀಡಿದರು.

ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿ, ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಂಡು ವಶ ಹೆಚ್ಚಾಗಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ವರದಿ ಪ್ರಜಾ ಶಕ್ತಿ…