ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದಾರೆ.
ನೆನ್ನೆ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ 33,78,336/- ರೂ ಗಳ ಒಟ್ಟು 46 ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.