ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರಿನಲ್ಲಿ ನಡೆಯಲಿರುವ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದ ನಿಮಿತ್ತ ಇಂದು ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ರವರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೆ 180 ಎಕರೆ ಭೂಮಿಯನ್ನು ನೀಡಿದ ರೈತರಿಗೆ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಶಿವರಾಜ್, ಹಾಗೂ ಪಕ್ಷದ ನಾಯಕರುಗಳು, ಮುಖಂಡರು ಭಾಗವಹಿಸಿದ್ದರು.