ಶಿವಮೊಗ್ಗ: ಭ್ರಷ್ಟಾಚಾರಮುಕ್ತ ಆಡಳಿತಕ್ಕಾಗಿ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಪಕ್ಷದ ಅಭ್ಯರ್ಥಿ ನೇತ್ರಾವತಿ ಗೌಡ ಹೇಳಿದರು.
ಅವರು ಇಂದು ಹೊಸಮನೆ ಬಡಾವಣೆ ಸೇರಿದಂತೆ ವಿವಿಧೆಡೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮತ ಯಾಚನೆ ಮಾಡಿ ಮಾತನಾಡಿದರು.
ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತುಕೊಟ್ಟಿದೆ. ಅರವಿಂದ ಕೇಜ್ರಿವಾಲ ಅವರ ಕಾರ್ಯವೈಖರಿಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ತಾವು ಗೆದ್ದರೆ ಜನಪರ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿಗೆ ಆದ್ಯತೆ ಕೊಡುವೆ. ಮುಖ್ಯವಾಗಿ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವೆ. ಭ್ರಷ್ಟಾಚಾರಮುಕ್ತ ಸ್ವಚ್ಛ ಆಡಳಿತಕ್ಕಾಗಿ ನನ್ನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖರಾದ ಸುರೇಶ್‌ಕೋಟೇಕಾರ್, ಪುಷ್ಪಲತಾ ,ಮಂಜುಳಾ, ಶ್ರೀನಿವಾಸ, ಕಲಂದರ್, ಹೆಚ್.ಅಹ್ಮದ್ ಸೇರಿದಂತೆ ಹಲವರಿದ್ದರು.