ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ನಲ್ಲಿ ಇಂದು ಬೆಳಗ್ಗೆ ವಾಯು ವಿಹಾರಕ್ಕೆ ಬಂದವರನ್ನು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ ಭೇಟಿಯಾಗಿ ಮತಯಾಚನೆ ಮಾಡಿದರು.


ನೆಮ್ಮದಿಯ ಶಿವಮೊಗ್ಗ ನಿರ್ಮಾಣಕ್ಕೆ ಕೈ ಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಪ್ರಮುಖರಾದ ವೈ.ಹೆಚ್.ನಾಗರಾಜ್ ಸೇರಿದಂತೆ ಜೆಡಿಎಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ…