ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹುಣಸೋಡು, ಕೋಮ್ಮನಾಳ್, ಸುತ್ತಕೋಟೆ, ಬೀರನಕೆರೆ, ಮಲ್ಲಾಪುರ, ವಿಠಗೊಂಡನಕೊಪ್ಪ,ಹಾರನ್ನಹಳ್ಳಿ, ತ್ಯಾಜವಳ್ಳಿ, ಗೆಜ್ಜೆನಹಳ್ಳಿ, ಗೋಂದಿಚಟ್ನಹಳ್ಳಿ, ಗ್ರಾಮದಲ್ಲಿ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಆರ್ಥಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಕಷ್ಟದಲ್ಲಿರುವ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ಶಾಸಕರಾದ ಶ್ರೀ ಕೆ.ಬಿ. ಅಶೋಕ ನಾಯ್ಕ ವಿತರಿಸಿದರು.

ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ ಸರ್ಕಾರದ ವತಿಯಿಂದ ಕಟ್ಟಡ ಕಾರ್ಮಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಕಾರ್ಮಿಕರಿಗೆ ಈ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಗ್ರಾಮಸ್ಥರು, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ