ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ರವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷರಾದ ಸುರೇಶ ಶೆಟ್ಟಿ ರವರು.ಜಿಲ್ಲಾ ರಕ್ಷಣಧಿಕಾರಿಗಳು ಈದ್ ಮಿಲಾದ್ ಹಾಗೂ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆಯನ್ನು ಹತ್ತಿಕ್ಕಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಪೊಲೀಸರು ಹಗಲು ರಾತ್ರಿ ಶ್ರಮ ಪಟ್ಟಿದ್ದಾರೆ ಹಾಗಾಗಿ ನಮ್ಮ ಜಯಕರ್ನಾಟಕ ಸಂಘಟನೆ ವತಿಯಿಂದ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುರೇಶ ಶೆಟ್ಟಿ ಕಾರ್ಯಧ್ಯಕ್ಷ ಪಾಶುರಾಮ್ ಪ್ರದಾನ್ ಕಾರ್ಯದರ್ಶಿ ನಾಗರಾಜ್ ಮಹಿಳಾ ಅಧ್ಯಕ್ಷೆ ನಾಜಿಮ್ ಕಾರ್ಯದರ್ಶಿ ನಾಗರಾಜ್ ಶೆಟ್ಟಿ ಸಂಚಾಲಕರು ತ್ಯಾಗರಾಜ್ ಮಹಿಳಾ ಕಾರ್ಯದರ್ಶಿ ಪ್ರೇಮ ಶೆಟ್ಟಿ ಸುಜಾತಾ ಶಮಿಮ್ ಬಾನು ಮುಂತಾದವರು ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ