ಬೆಂಗಳೂರು ನ್ಯೂಸ್…
ಮುಖ್ಯಮಂತ್ರಿ ಶ್ರೀ Siddaramaiah ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಕಳೆದ ಸೋಮವಾರ ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಮ್ಮ ದೋಣಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಮೀನುಗಾರರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಿ ವೈ ರಾಘವೇಂದ್ರ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮನವಿ ಮಾಡಿದರು.
ಇದಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಶೀಘ್ರವೇ ಮೀನುಗಾರರ ನೋವಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.