ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಪದೇಪದೇ ನಡೆಯುತ್ತಿದ್ದು ಜಿಲ್ಲೆಗೆ ಕೆಟ್ಟ ಹೆಸರು ಬರುವಂತಾಗಿದೆ ದೂರದ ಪ್ರಯಾಣದಲ್ಲಿರುವ ಪ್ರಯಾಣಿಕರ ವಸ್ತುಗಳು ಕಳ್ಳತನವಾಗಿದ್ದು ಕೆಲವೇ ಪ್ರಯಾಣಿಕರು ಮಾತ್ರ ಕೇಸ್ ದಾಖಲಿಸಿದ್ದಾರೆ. ಹೆಚ್ಚಿನ ಪ್ರಕರಣದಲ್ಲಿ ಪ್ರಯಾಣಿಕರು ದೂರದ ಊರಿನವರಾದ್ದರಿಂದ ಪ್ರಕರಣಗಳನ್ನು ದಾಖಲಿಸಲು ಸಾಧ್ಯವಾಗುತ್ತಿಲ್ಲ. ಈ ವಿಷಯವಾಗಿ ಇಂದು ಶಿವಮೊಗ್ಗ ಜಿಲ್ಲಾ ಕರವೇ ಯುವ ಸೇನೆ ವತಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಜಿಲ್ಲಾ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಯುವ ಸೇನೆ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಕರವೇ ಕಿರಣ್ ರವರು ಕೆಎಸ್ಆರ್ಟಿಸಿ ಅವಣದಲ್ಲಿ ಇನ್ನು ಹೆಚ್ಚಿನ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸುವ ಅವಶ್ಯಕತೆ ಇದೆ ಹಾಗೂ ಇಲಾಖೆಯು ಭದ್ರತಾ ಸಿಬ್ಬಂದಿಗಳನ್ನು ಕೂಡ ನಿಯೋಜಿಸಬೇಕು ಈ ಬಗ್ಗೆ ಜಿಲ್ಲಾ ನಿಯಂತ್ರಣ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದೇವೆ. ಇನ್ನು 15 ದಿನಗಳಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಉಗ್ರವಾದ ಹೋರಾಟ ಮಾಡುತ್ತೆವೆ ಎಂದು ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ರಾಮು ಪ್ರಪುಲಚಂದ್ರ ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು