ಪೆಗಾಸಸ್ ತಂತ್ರಾಂಶದ ಮೂಲಕ ಇಡೀ ದೇಶದಲ್ಲಿ ಬೇಹುಗಾರಿಕೆ ನಡೆಸಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರವನ್ನು ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಆಗ್ರಹಿಸುತ್ತಿದೆ.
ಪೆಗಾಸಸ್ ಎಂಬುದು ಇಸ್ರೇಲ್ ಕಂಪನಿ ರಚಿಸಿದ ತಂತ್ರಾಂಶವಾಗಿದ್ದು, ಇದನ್ನು ದೇಶಗಳು ಭಯೋತ್ಪಾದನೆ ನಿಗ್ರಹ ಮತ್ತು ದೇಶ ರಕ್ಷಣೆಗಾಗಿ ಉಪಯೋಗಿಸುತ್ತವೆ. ಭಾರತ ಕೂಡ ಇದೇ ಉದ್ದೇಶಕ್ಕೆ ಇದನ್ನು ಖರೀದಿಸಿದೆ. ಆದರೆ, ಅದನ್ನು ಮೂಲ ಉದ್ದೇಶಕ್ಕೆ ಬಳಸದೆ, ದುರ್ಬಳಕೆ ಮಾಡಿಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೊಂದು ಹೀನಾಯ ಕೃತ್ಯವಾಗಿದ್ದು, ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರು ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ.
ಕರ್ನಾಟಕವೂ ಸೇರಿದಂತೆ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಪ್ರಮುಖ ನಾಯಕರು, ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ಚುನಾವಣಾ ಆಯುಕ್ತರು, ನಾಡಿನ ಪ್ರಮುಖ ಪತ್ರಕರ್ತರು ಸೇರಿದಂತೆ ತಮಗೆ ಆಗದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿಗಾ ಇರಿಸಲು ಫೆÇೀನ್ ಗಳನ್ನು ಕದ್ದಾಲಿಕೆ ಮಾಡಿ, ಬ್ಲಾಕ್ ಮೇಲ್ ತಂತ್ರಗಾರಿಕೆ ಅನುಸರಿಸಿ ಅಧಿಕಾರಕ್ಕೆ ಬಂದಿದ್ದಾರೆ. ಇದರಿಂದ ಮೋದಿಯವರ ಅಸಲಿ ಮುಖವಾಡ ಜಗಜ್ಜಾಹೀರಾಗಿದೆ.
ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ, ಸುಬೇಂದು ಅಧಿಕಾರಿ, ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್, ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ, ಸಿದ್ಧರಾಮಯ್ಯ (ಆಪ್ತ ಸಹಾಯಕ), ಹಾಲಿ ಸಿಎಂ ಯಡಿಯೂರಪ್ಪ ಸೇರಿದಂತೆ ತಮ್ಮನ್ನು ವಿರೋಧಿಸಿದವರನ್ನು ಹಣಿಯಲು ಪೆಗಾಸಸ್ ಬೇಹುಗಾರಿಕೆ ಅಸ್ತ್ರ ಪ್ರಯೋಗ ಮಾಡಿದ್ದಾರೆ.
ಇದರಿಂದ ರಾಜ್ಯದಲ್ಲಿ 2 ವರ್ಷಗಳ ಹಿಂದೆ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನಕ್ಕೂ ಕಾರಣವಾಯಿತು. ಅಲ್ಲದೇ, ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ಪ್ರಮುಖ ನಾಯಕರನ್ನು ಈ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಿ ಬ್ಲಾಕ್ ಮೇಲ್ ತಂತ್ರ ಪ್ರಯೋಗಿಸಿ ಅವರನ್ನು ಸೆಳೆದು ಅಧಿಕಾರಗ್ರಹಣ ಮಾಡಿದ್ದಾರೆ ವಿನಃ ಸಮರ್ಪಕ ಜನಾದೇಶದಿಂದ ಅಲ. ಕಳೆದ ಲೋಕಸಭೆ ಚುನಾವಣೆಯಲ್ಲಿ ಇದೇ ತಂತ್ರಗಾರಿಕೆ ಬಳಸಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಕೇಂದ್ರ ಸರ್ಕಾರದ ಈ ಬೇಹುಗಾರಿಕೆ ಕೃತ್ಯವನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತಿದೆ. ಕೂಡಲೇ ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಂದ ಸೂಕ್ತ ತನಿಖೆ ನಡೆಸಬೇಕು. ತಂತ್ರಾಂಶವನ್ನು ದುರ್ಬಳಕೆ ಮಾಡಿಕೊಂಡು ಪ್ರಪಂಚದೆದುರು ಭಾರತ ತಲೆ ತಗ್ಗಿಸುವಂತೆ ಮಾಡಿದ ಕೇಂದ್ರ ಸರ್ಕಾರವನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾಗೊಳಿಸಬೇಕು ಎಂದು ಯುವ ಕಾಂಗ್ರೆಸ್ ಆಗ್ರಹಿಸುತ್ತಿದ್ದೇವೆ.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ರಾಜ್ಯ ಕಾರ್ಯದರ್ಶಿ ಚೇತನ್ ,ಡಾ ಸಿ ಜಿ ಮಧುಸೂದನ್ ಯುವ ಕಾಂಗ್ರೆಸ್ ಮುಖಂಡರು ,ವಿನಯ್ ತಾಂಡ್ಲೆ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ,ಗಿರೀಶ್ ಉತ್ತರ ಯುವ ಕಾಂಗ್ರೆಸ್,ಭರತ ಗ್ರಾಮಾಂತರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಾಲಾಜಿ, ರವಿ, ವಿಜಯ್, ಚಂದ್ರೋಜಿ ,ಪ್ರಮೋದ , ಅಬ್ದುಲ್, ಮುಬಾಸಿರ್ ,ರಾಜು , ಅರ್ಜುನ್ ,ಮಂಜು ,ಅನಿಲ ,ರವಿ, ಆಲ್ವಿನ್, ರಾಖಿ, ಸಂಜಯ್ ಹಾಗೂ ಉಪಸ್ಥಿತರಿದ್ದರು
ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ