ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ ನೆರವು ಕಾರ್ಯಕ್ರಮ ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು.

ಮಂಗಳೂರು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25-12-2023 ರಂದು ನಡೆದ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ “ನೆರವು” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಭಾರಿ ಎಂ.ಆರ್.ಜಿ ಗ್ರೂಪ್ ನಿಂದ 2000 ಕುಟುಂಬಗಳಿಗೆ ಹಾಗೂ 78 ಸಂಘ ಸಂಸ್ಥೆಗಳು ಸೇರಿದಂತೆ ಒಟ್ಟು 4 ಕೋಟಿ ಗೊ ಮಿಕ್ಕಿ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್, ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ, ಎಂ.ಆರ್.ಜಿ. ಗ್ರೂಪ್ ಆಡಳಿತ ನಿರ್ದೇಶಕರಾದ ಬಂಜಾರ ಪ್ರಕಾಶ್ ಶೆಟ್ಟಿ, ಗೌರವ್ ಪಿ. ಶೆಟ್ಟಿ ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ