ಹೊಸ ವರ್ಷದ ಶುಭಾಶಯಗಳು 2024…

ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷ 2024ನ್ನು ಆಚರಿಸಿದರು.

ಅದೇ ಸಮಯದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಎಲ್ಲಾ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಮತ್ತು ಕುಟುಂಬದವರಿಗೂ ಹಾಗೂ ಸಮಸ್ತ ನಾಗರಿಕರಿಗೂ ಹೊಸ ವರ್ಷ 2024 ರ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಮತ್ತು ಶಿವಮೊಗ್ಗ ನಗರದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾಶಕ್ತಿ