ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ವೆಂಕಟೇಶನಗರ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲಿರಿಸಿ ವಿಶೇಷ ಪೂಜೆ ಸಲ್ಲಿಸಿ ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಮಾನ್ಯ ಶ್ರೀ ರುದ್ರೇಗೌಡರವರು, ಶಾಸಕರು ವಿಧಾನ ಪರಿಷತ್ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದರು.