ಬೈಂದೂರ್ ನ್ಯೂಸ್…

ಉಡುಪಿ ಜಿಲ್ಲೆಯ ಬೈಂದೂರ ತಾಲೂಕಿನ ಬಿಜೆಪಿಯ ಕಾರ್ಯಕರ್ತರ ಸಮಾವೇಶವನ್ನು ಸಂಸದ ಬಿ.ವೈ.ರಾಘವೇಂದ್ರ ರವರು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಸಮೃದ್ಧಿ ಬೈಂದೂರು ಸಮರ್ಥ ಭಾರತ ಎಂಬ ನಿಟ್ಟಿನಲ್ಲಿ ನಾನು ಕೆಲಸವನ್ನು ನಿರ್ವಹಿಸಿದ್ದೇನೆ.ತಾಲೂಕಿನ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಯುಗದಲ್ಲಿ ನಮ್ಮ ದೇಶ ಕಂಡಿರುವ ಪ್ರಗತಿಯ ಹೆಜ್ಜೆಗಳ ಬಗ್ಗೆ ತಿಳಿಸಿದರು.
ನಾನು ವಿಶೇಷವಾಗಿ ಗಮನ ಸೆಳೆದಿದ್ದು ಬೈಂದೂರಿನ ಅಭಿವೃದ್ಧಿ ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀ ಯೋಜನೆಗಳ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.