ಕರ್ನಾಟಕ ವಾರ್ತೆ : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಬೋವಿ ವಿದ್ಯಾವರ್ಧಕ ಸಂಘ ಇವರ ಸಂಯುಕ್ತಾಕ್ಷರದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಕಲ ಜೀವಾವಳಿಯ ನೆಮ್ಮದಿಯ ಬದುಕಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಕಾಯಕದಲ್ಲಿ ತೊಡಗಿದ್ದ ಕರ್ಮಯೋಗಿ ಎಂದೇ ಖ್ಯಾತನಾಮರಾಗಿದ್ದ ಸಿದ್ಧರಾಮರು ಜಾತಿ, ಧರ್ಮವನ್ನು ಮೀರಿದ ಅನುಭಾವಿಗಳು. ಇವರು ಕಾಲಾನಂತರದಲ್ಲಿ ತಮ್ಮ ನಿರಂತರ ಸಾಧನೆಯಿಂದಾಗಿ ಮಹಾಶಿವಯೋಗಿಯಾದರು ಎಂದರು.

ಭೋವಿ ಸಮುದಾಯದವರು ತಮ್ಮ ಕಾಯಕದಿಂದಾಗಿ ಚದುರಿ ಹೋಗಿದ್ದು, ತಮ್ಮ ಅಸ್ಮಿತತೆಗಾಗಿ, ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತಿತರ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳಲು ಸಂಘಟಿತರಾಗಬೇಕಾದ ಅಗತ್ಯವಿದೆ. ಇದು ಶಕ್ತಿಯುತ ಸಂಘಟನೆಯಾಗಿ ಬೆಳೆದಲ್ಲಿ ಕೋರಿಕೆ ಬೇಡಿಕೆಗಳ ಈಡೇರಿಕೆಗೆ ಸಹಕಾರಿಯಾಗಲಿದೆ ಎಂದರು.

ಸಮುದಾಯದ ಜನರ ಕೋರಿಕೆಯಂತೆ ಸರ್ಕಾರದಿಂದ ನಿವೇಶನ ಕೊಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ನುಡಿದರು.

ವರದಿ ಪ್ರಜಾ ಶಕ್ತಿ