2023-24 ನೇ ಸಾಲಿಗೆ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.


ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಿಗೆ ಬ್ಯಾಟರಿಚಾಲಿತ ವ್ಹೀಲ್ ಚೇರ್‍ಗನ್ನು ನೀಡಲಾಗುವುದು. ಅರ್ಜಿದಾರರು ವಾಸಸ್ಥಳ ದೃಢೀಕರಣ, ವಿಕಲತೆಯ ಪ್ರಮಾಣಪತ್ರ(ಯುಡಿಐಡಿ ಕಾರ್ಡ್), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಗುರುತಿನ ಚೀಟಿ ಇವುಗಳೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಪ್ರತಿ ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್‍ಡಬ್ಲ್ಯು) ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿಗಳನ್ನು ಫೆ.23 ರೊಳಗೆ ಆಯಾ ತಾಲ್ಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳು ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಭಾರತ ಸಂಚಾರ ನಿಗಮದ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ದೂ.ಸಂ: 08182-250676, 251676 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ವರದಿ ಪ್ರಜಾ ಶಕ್ತಿ