ಸಂಸದ ಅನಂತಕುಮಾರ್ ಹೆಗಡೆ‌ವರ್ತನೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದು ಮತ್ತು ಕೋಮುಸಂಘರ್ಷಕ್ಕೆ ಪ್ರಚೋದನೆನೀಡಿದ ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ ಅವರನ್ನು ತಕ್ಷಣ ಬಂಧಿಸಬೇಕು ಮತ್ತು ಅವರ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯನ್ನು ನಡೆಸಿದರು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನ ದಿಂದ ಪ್ರತಿಭಟನೆ ಮೆರವಣಿಗೆ ಆರಂಭಸಿ ಬಾಲರಾಜ್ ಅರಸ್ ರಸ್ತೆ ಮೂಲಕ ಚಲಿಸಿ ನಂತರ ಮಹಾವೀರ ಸರ್ಕಲ್ ( ಕೋರ್ಟ್ ಸರ್ಕಲ್ ನಲ್ಲಿ ) ಭಾರಿ ಪ್ರತಿಭಟನೆಯನ್ನು ನಡೆಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು
ಹೆಚ್. ಎಸ್. ಸುಂದರೇಶ್ , ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ , ಕಾಂಗ್ರೆಸ್ ಸಂಯೋಜಕ ಜಿಡಿ ಮಂಜುನಾಥ್ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.