ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಸನ್ಮಾನ್ಯ, ಶ್ರೀ ಎಸ್ ಮಧು ಬಂಗಾರಪ್ಪನವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ 67ನೇ ರಾಷ್ಟ್ರ ಮಟ್ಟದ 19 ವರ್ಷದೊಳಗಿನ ವಿದ್ಯಾರ್ಥಿಗಳ ಕಬಡ್ಡಿ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದೆರು.

ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದ ಸ್ವಾಮೀಜಿ ಹಾಗೂ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾ.ಆ.ಸೇ ಶ್ರೀಮತಿ ಸಿಂಧು ರೂಪೇಶ್ ಹಾಗೂ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀ ಶಿವರಾಮೇಗೌಡ ಸೇರಿದಂತೆ ಅಧಿಕಾರಿಗಳು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ