75ನೇ ಗಣರಾಜ್ಯೋತ್ಸವದ ಅಂಗವಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದ್ವಜಾರೋಹಣವನ್ನು ಮಾಡಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಶುಭಾಷಯಗಳನ್ನು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧಿಕ್ಷಕರು-2, ಶಿವಮೊಗ್ಗ ಜಿಲ್ಲೆ, ಶ್ರೀ ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ, ಶ್ರೀ ಕೃಷ್ಣಮೂರ್ತಿ ಟಿ.ಪಿ, ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರುಗಳು, ಪೊಲೀಸ್ ನಿರೀಕ್ಷಕರುಗಳು, ಪೊಲೀಸ್ ಉಪ ನಿರೀಕ್ಷಕರುಗಳು ಮತ್ತು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಹಾಜರಿದ್ದರು.

ವರದಿ ಪ್ರಜಾ ಶಕ್ತಿ