ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 02 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.