ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet ) ಮತ್ತು 75 ದೋಷಪೂರಿತ ಸೈಲೆನ್ಸರ್ (Defective Silencer) ಗಳನ್ನು ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಸಮ್ಮುಖದಲ್ಲಿ ಶಿವಮೊಗ್ಗ ನಗರದ ಗೋಪಿ ವೃತ್ತ ದಲ್ಲಿ ಬುಲ್ಡೋಜರ್ ಅನ್ನು ಬಳಸಿ ನಾಶ ಪಡಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ –ಬಿ ಉಪ ವಿಭಾಗ,ಶ್ರೀ ಸಂತೋಷ ಕುಮಾರ್ ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರಿ ವೃತ್ತ ಮತ್ತು ಅಧಿಕಾರಿ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ