ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅಭಿನಯ ಶಾರದೆ’ ಎಂದೇ ಜನಪ್ರಿಯರಾಗಿದ್ದ ನಟಿ ಜಯಂತಿ ಇಹಲೋಕ ತ್ಯಜಿಸಿದ್ದಾರೆ .ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ರಾತ್ರಿ ವಿಧಿವಶರಾಗಿದ್ದಾರೆ .ಇವರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರಾಜ್ಯಪ್ರಶಸ್ತಿ, ಫಿಲಂಫೇರ್ ಪ್ರಶಸ್ತಿ, ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಜಯಂತಿ ಈಗ ಬಾರದ ಲೋಕಕ್ಕೆ ತೆರಳಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ಕೊಂಡಿ ಕಳಚಿದೆ. ಜಯಂತಿ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153