ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ದಿಡೀರನೆ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಿದರು.
ಅತಿಥಿ ಉಪನ್ಯಾಸಕರು ಸೇರಿದಂತೆ ಹೊರಗುತ್ತಿಗೆಯ ಎಲ್ಲಾ ನೌಕರರಿಗೂ ಕಳೆದ ವರ್ಷ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೂ ಸಂಬಳವನ್ನು ನೀಡಿರುವುದಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಧಿಕ್ಕಾರ ಕೂಗುತ್ತಾ ನೌಕರರು ತಮ್ಮ ಸಂಬಳ ಸಿಗುವವರೆಗೂ ಹೋರಾಟ ಮುಂದುವರೆಸಿದ್ದಾಗಿ ಪಟ್ಟು ಹಿಡಿದಿದ್ದು ಶಂಕರ್ ಘಟ್ಟದಲ್ಲಿರುವ ವಿವಿ ಆವರಣದಲ್ಲಿಯೇ ಪ್ರತಿಭಟನೆ ನಡೆಸಿದರು.
ಕೆಲಸ ಮಾಡುವ ಹೊರಗುತ್ತಿಗೆ ನೌಕರರನ್ನು ಕಡೆಗಣಿಸುತ್ತಿರುವ ಆಡಳಿತ ಮಂಡಳಿಯ ವಿರುದ್ಧ ದಿಕ್ಕಾರವನ್ನು ಕೂಗಿದರು.
ಸಂಬಳವಿಲ್ಲದೆ ಜೀವನ ನಡೆಸಲು ತುಂಬಾ ಕಷ್ಟಕರವಾಗಿದ್ದು.ಈ ಕೆಲಸವನ್ನು ಬಿಟ್ಟು ಬೇರೆ ಕೆಲಸವನ್ನು ಸಹ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲಸದ ವಿಷಯದಲ್ಲಿ ದಿನವಿಡಿ ದುಡಿಸಿಕೊಳ್ಳುತ್ತಿರುವ ಆಡಳಿತ ಮಂಡಳಿಯು ವೇತನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಪ್ರತಿಭಟನೆಕಾರರ ದೂರಿದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರು ಸೇರಿದಂತೆ ಹಲವು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ನ್ಯಾಯ ಸಿಗುವವರೆಗೂ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದರು.
ವರದಿ : ಸಂತೋಷ್ ರಾಮ್
