ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿ ಬಂಟರ ಯಾನೆ ನಾಡವರ ಸಂಘ(ರಿ.) ನೂತನವಾಗಿ ನಿರ್ಮಿಸಿರುವ ಸುಸಜ್ಜಿತ “ಬಂಟರ ಸಮುದಾಯ ಭವನ” ವನ್ನು ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಶಾಸಕರಾದ , ಶ್ರೀ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ರುದ್ರೇಗೌಡ ಅವರು ಹಾಗೂ ಶ್ರೀ ಅರುಣ್ ಅವರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ , ಭಾರತಿ ಶೆಟ್ಟಿ ,ಉದ್ಯಮಿ ಶ್ರೀ ಪ್ರಕಾಶ್ ಶೆಟ್ಟಿ ಅವರು, ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀಡಾ.ಸತೀಶ್ ಕುಮಾರ್ ಶೆಟ್ಟಿ ಅವರು, ಪ್ರಮುಖರಾದ ಶ್ರೀ ದಿವಾಕರ್ ಶೆಟ್ಟಿ ಅವರು ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ