ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಗೊಪ್ಪ ಗ್ರಾಮದ ವಾಸಿ ಶ್ರೀ ನವೀನ್ ಕುಮಾರ್ ನಾಯ್ಕ್ ರವರ ಬಂಗಾರದ ಆಭರಣಗಳನ್ನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0052/2024 ಕಲಂ 380 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಆರೋಪಿತರು ಮತ್ತು ಕಳುವಾದ ಮಾಲಿನ ಪತ್ತೆಗಾಗಿ ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶದಲ್ಲಿ ಶ್ರೀ ಬಾಬು ಆಂಜನಪ್ಪ, ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಮಂಜುನಾಥ್.ಬಿ, ಪಿಐ ತುಂಗಾನಗರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ , ಶ್ರೀ ಶಿವಪ್ರಸಾದ್ ವಿ. ಪಿಎಸ್ಐ, ಶ್ರೀ ಮಂಜುನಾಥ್ ಪಿ.ಎಸ್.ಐ, ಶ್ರೀ ರಘುವೀರ್ ಎಮ್ ಪಿ.ಎಸ್.ಐ, ಶ್ರೀ ಕುಮಾರ ಕೂರಗುಂದ ಪಿ.ಎಸ್.ಐ, ಶ್ರೀ ದೂದ್ಯಾನಾಯ್ಕ ಪಿ.ಎಸ್.ಐ, ಶ್ರೀ ಮನೋಹರ್ ಎ.ಎಸ್.ಐ, ಮತ್ತು ಸಿಬ್ಬಂದಿಗಳಾದ ಹೆಚ್ಸಿ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ಸಿಪಿಸಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಹರೀಶ್ ಎಮ್.ಜಿ, ರವರಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.

ಸದರಿ ತನಿಖಾ ತಂಡವು ಪ್ರಕರಣದ ಆರೋಪಿ ಶಶಿನಾಯ್ಕ, 27 ವರ್ಷ, ಚಿಕ್ಕಪಟ್ಟಣಗೆರೆ ಕಡೂರು ತಾಲ್ಲೂಕು, ಚಿಕ್ಕಮಗಳೂರು ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲು 15,73,000/- ರೂಗಳ ಒಟ್ಟು 286 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ರೂ 6020/- ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

ವರದಿ ಪ್ರಜಾ ಶಕ್ತಿ