ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಇಂದು ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀ ಡಿ ಎಸ್ ಅರುಣ್ ಅವರು ಪಾಲ್ಗೊಂಡರು.

ತದನಂತರ ಅಭಿಮಾನಿ ಸಂಘದಿಂದ ಕೇಕ್ ಕಟ್ ಮಾಡೋ ಮೂಲಕ ವಿಶೇಷವಾಗಿ ಹುಟ್ಟು ಹಬ್ಬವನ್ನು ಆಚರಿಸಿದರು.ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ ರುದ್ರೇಗೌಡ ಅವರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಹೆಚ್ ಮಾಲತೇಶ್, ಜಿಲ್ಲಾ ಕಾರ್ಯದರ್ಶಿ ಜಗದೀಶ್, ಮುಖಂಡರಾದ ಜ್ಯೋತಿ ಪ್ರಕಾಶ್, ಎನ್.ಜೆ. ರಾಜಶೇಖರ್, ಸಂತೋಷ್ ಬಳ್ಳೇಕೆರೆ, ರಾಜೇಶ್ ಕಾಮತ್, ದಿವಾಕರ ಶೆಟ್ಟಿ, ಎಸ್ ಶ್ರೀನಿವಾಸ್, ವೀರಭದ್ರಪ್ಪ ಪೂಜಾರ್, ಬಾಬಿ ನಾಯ್ಡು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ