ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾ. 04 ಮತ್ತು 05 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ 2023-24ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾ. 04 ರಂದು ಬೆಳಗ್ಗೆ 10.00ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಲಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿರುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ. ನಾಗೇಂದ್ರ ಕ್ರೀಡಾ ಜ್ಯೋತಿ ಸ್ವೀಕರಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್‍ರವರ ಗೌರವ ಉಪಸ್ಥಿತಿ ಇರಲಿದೆ. ಸಂಸದ ಬಿ.ವೈ. ರಾಘವೇಂದ್ರ ಧ್ವಜಾರೋಹಣ ಮಾಡಲಿದ್ದಾರೆ.