ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ತಿಳಿಸಿದ್ದಾರೆ.
ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.