ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮತ್ತು ನನ್ನ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ಮುಖ್ಯಮಂತ್ರಿಗಳು ವಿದ್ಯಾಭ್ಯಾಸ ಮಾಡಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಶಾಲೆಗೆ ತಲಾ10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಯೋಜನೆಯನ್ನು ಉದ್ಘಾಟಿಸಲಾಯಿತು.
ಕೈಗಾರಿಕಾ ಸಚಿವ ಎಂ. ಬಿ.ಪಾಟೀಲ್ , ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ , ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.