ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಕಲಾಜಾಥಾ’ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.


ಕಲಾಜಾಥ ಸಂಚಾರಿ ಪ್ರದರ್ಶನ ವಾಹನಗಳ ಮೂಲಕ ಬೀದಿನಾಟಕ ಕಲಾತಂಡಗಳು ಜಿಲ್ಲೆಯ ಆಯ್ದ 45 ಗ್ರಾಮಗಳಲ್ಲಿ ಇಂದಿನಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತಂತೆ ಪ್ರಚಾರ ಕೈಗೊಳ್ಳಲಿವೆ.
ಈ ವೇಳೆ ವಾರ್ತಾ ಇಲಾಖೆ ಸಿಬ್ಬಂದಿಗಳು, ಕಲಾವಿದರು ಹಾಜರಿದ್ದರು.

ವರದಿ ಪ್ರಜಾ ಶಕ್ತಿ