ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ ಶಾಲೆ ಹತ್ತಿರ, ಕೆನರಾ ಬ್ಯಾಂಕ್ ಹತ್ತಿರ ಕಾಶೀಪುರ ಸರ್ಕಲ್, ಚನ್ನಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಮಲವಗೊಪ್ಪ, ಅಶೋಕನಗರ ನಂದಿನಿ ಬೂತ್ ಹತ್ತಿರ, ಶ್ರೀ ಶಕ್ತಿ ಗಣಪತಿ ದೇವಸ್ಥಾನದ ಹತ್ತಿರ ಕೆ.ಆರ್.ಪುರಂ ರಸ್ತೆ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.