ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಆಯ್ಕೆ ಮಾಡಿದ ಸಂತಸದ ಕ್ಷಣವನ್ನು ಶಿವಮೊಗ್ಗ ವಿನೋಬನಗರದ ಸ್ವಗೃಹದಲ್ಲಿ ಪಕ್ಷದ ಪ್ರಮುಖರೊಂದಿಗೆ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಯಿತು.

ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರಿಗೆ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಾಗೂ ಪಕ್ಷದ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮಟ್ಟದ ಎಲ್ಲಾ ಹಿರಿಯರಿಗೆ ನಾನು ಈ ಸಂದರ್ಭದಲ್ಲಿ ಅಭಿನಂದನೆ ತಿಳಿಸಲು ಇಚ್ಛಿಸುತ್ತೇನೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಆಯ್ಕೆ ಮಾಡಿದ ಸಂತಸದ ಕ್ಷಣವನ್ನು ಶಿವಮೊಗ್ಗ ವಿನೋಬನಗರದ ಸ್ವಗೃಹದಲ್ಲಿ ಪಕ್ಷದ ಪ್ರಮುಖರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಪಟಾಕಿ ಸಿಡಿಸಿ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಯಿತು.