ಪ್ರತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಳ್ಳುವ ಮೂಲಕ ಆರೋಗ್ಯ ಸುರಕ್ಷತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಕರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಹೇಳಿದರು.
ನಗರದ ರೋಟರಿ ಮಿಡ್‌ಟೌನ್ ಸಭಾಂಗಣದಲ್ಲಿ ಆಯೋಜಿಸಿದ್ದ ಲಸಿಕಾ ಶಿಬಿರ ಉದ್ಘಾಟಿಸಿ ಮಾತನಾಡಿ, ಕರೊನಾ ಬಗ್ಗೆ ಆತಂಕಗೊಳ್ಳದೇ ಎಲ್ಲರೂ ಜಾಗೃತಿ ವಹಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡಬೇಕು. ಆಗಾಗ್ಗೆ ಸ್ಯಾನಿಟೈಸರ್ ಬಳಸಬೇಕು. ಕರೊನಾದಿಂದ ನಮ್ಮನ್ನು ರಕ್ಷಿಸಿಕೊಳ್ಳಲು ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕಿರುವುದು ಅತ್ಯಂತ ಅವಶ್ಯಕ. ಕೋವಿಡ್ ಲಸಿಕೆ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುತ್ತಿದೆ. ಖಾಸಗಿ ಲಸಿಕಾ ಕೇಂದ್ರಗಳಲ್ಲಿಯೂ ನಿಗಧಿತ ಹಣ ಪಾವತಿಸಿ ಲಸಿಕೆ ಪಡೆಯಬಹುದಾಗಿದೆ. ಇಂತಹ ಲಸಿಕಾ ಕೇಂದ್ರಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು.
ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಆಯಾ ಪ್ರದೇಶಗಳಲ್ಲಿ ಸ್ಲಂ ಬಡಾವಣೆಗಳನ್ನು ದತ್ತು ತೆಗೆದುಕೊಂಡು ಅವಶ್ಯವಿರುವವರಿಗೆ ಲಸಿಕೆಗಳನ್ನು ಒದಗಿಸಲು ಲಸಿಕಾ ಶಿಬಿರಗಳನ್ನು ಆಯೋಜಿಸಬೇಕು. ಬಡವರಿಗೆ ಉಚಿತವಾಗಿ ಲಸಿಕೆ ವ್ಯವಸ್ಥೆ
ಕಲ್ಪಿಸಬೇಕು.
ವೈದ್ಯ ಡಾ. ಧನಂಜಯ್ ಸರ್ಜಿ ಮಾತನಾಡಿ, ರೋಟರಿ ಮಿಡ್‌ಟೌನ್, ಚಾರಿಟಿ ಫೌಂಡೇಷನ್, ಸರ್ಜಿ ಆಸ್ಪತ್ರೆ ಸಹಯೋಗದಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ತುಂಬಾ ಹೈಟೆಕ್ ಆಗಿ ಎಲ್ಲ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡು ಲಸಿಕಾ ಕೇಂದ್ರ ಆರಂಭಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ
ಪಡೆದುಕೊಳ್ಳಬೇಕು.
ಮ್ಯಾನೇಜಿಂಗ್ ಟ್ರಸ್ಟಿ ಮಂಜಪ್ಪ ಅರಕೆರೆ ಮಾತನಾಡಿ, ಲಸಿಕಾ ಕೇಂದ್ರಕ್ಕೆ 6000 ಲಸಿಕೆ ಪೂರೈಸಲು ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಲಸಿಕೆ ಪಡೆದು ಕರೊನಾದಿಂದ ಸಂರಕ್ಷಿಸಿಕೊಳ್ಳಬೇಕು.
ಜಿಲ್ಲಾ ಗವರ್ನರ್ ಎಂ.ಜಿ.ರಾಮಚ0ದ್ರಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯು ನಿರಂತರವಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡುಬAದಿದೆ. ಕರೊನಾ ನಿಯಂತ್ರಣ ವಾತಾವರಣ ರೂಪಿಸುವಲ್ಲಿಯೂ ರೋಟರಿ ಸೇವೆ ಸಲ್ಲಿಸುತ್ತಿದೆ.
ವ್ಯಾಕ್ಸಿನ್ ಸೆಂಟರ್ ರ‍್ಮನ್ ಗುರುರಾಜ್ ಗಿರಿಮಾಜಿ ವ್ಯಾಕ್ಸಿನ್ ಕೇಂದ್ರ ಮತ್ತು ಕರೊನಾ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಡಾ. ಶಿವರಾಮಕೃಷ್ಣ, ಶಿವಪ್ರಸಾದ್ ಪಾಟೀಲ್, ರವೀಂದ್ರ, ಡಾ.
ರಾಜೇಶ್, ಹರ್ಷ, ಡಾ. ರಮೇಶ್, ಜಿ.ವಿಜಯ್‌ಕುಮಾರ್, ಕೆ.ಪಿ.ಶೆಟ್ಟಿ, ರಾಜಶೇಖರ್, ಅನಿಲ್, ಧನಂಜಯ್, ಮಿಡ್‌ಟೌನ್ ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153