ಕರ್ನಾಟಕ ಸರ್ಕಾರದಿಂದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ರಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಎಸ್.ರವಿ ಕುಮಾರ್ ಇವರನ್ನು ನೇಮಿಸಲಾಗಿದೆ.

ವಿದ್ಯಾರ್ಥಿದೆಸೆಯಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ ತಮ್ಮದೇ ಅದ ಕೊಡುಗೆ ನೀಡಿದ್ದಾರೆ. ಪಕ್ಷದ ಹಿರಿಕಿರಿಯರೊಂದಿಗೆ ಸುಮಧುರ ಸಂಬಂಧವನ್ನು ಹೊಂದಿದ್ದಾರೆ.

ಹಲವಾರು ಬಾರಿ ‌ಹೊಳೆಹೊನ್ನೂರು ವಿಧಾನಸಭಾ ಕ್ಷೇತ್ರ ಇದ್ದ ಕಾಲದಿಂದಲೂ ಶಾಸನಸಭೆಗೆ ಟಿಕೆಟ್ ಪಡೆಯುವಲ್ಲಿ ಸಫಲವಾಗಲಿಲ್ಲ ಎಂಬ ಬೇಸರ ಇವರಿಗೆ ಕಾಡುತ್ತಲೇ ಇತ್ತು.
ಪಕ್ಷ ತಡವಾಗಿಯಾದರೂ ಇವರನ್ನ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿರುವುದು ಅವರ ಅ‌ಭಿಮಾನಿಗಳಿಗೆ ಸಂತಸ ತಂದಿದೆ.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ ಎ ಸುರೇಶ್ ಶೆಟ್ಟಿ ಶುಭಕೋರಿದ್ದಾರೆ.

ವರದಿ ಪ್ರಜಾ ಶಕ್ತಿ