ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 26 ರ ಹಳೆ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಲಾಯಿತು.


ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮತದಾನದ ದಿನವೂ ಉತ್ಸಾಹದಲ್ಲಿ ತಪ್ಪದೆ ಮತದಾನ ಮಾಡಬೇಕೆಂದು ಪ್ರತಿಜ್ಞಾ ವಿಧಿ ಭೋದಿಸಲಾಯ್ತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೂಡಲ್ ಅಧಿಕಾರಿಗಳಾದ ಅನುಪಮ.T.R. ಸುಪ್ರಿಯಾ. ರತ್ನಾಕರ್. ರೇಣು. ಗೀತಾ. ಆರಿಫ್ ಮತ್ತು ಅಧಿಕಾರಿ ಸಿಬ್ಬಂದಿಗಳು, ಬಿ.ಎಲ್.ಓ ಮತ್ತು ಮೇಲ್ವಿಚಾರಕರು, ಹಾಜರಿದ್ದರು.

ವರದಿ ಪ್ರಜಾ ಶಕ್ತಿ