ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ನಾಲ್ಕು ದಿನಗಳ ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ, ಲಲಿತ ಕಲೆ ಸೇರಿದಂತೆ ೨೫ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸ ಲಾಗಿತ್ತು. ಬೆಂಗಳೂರು, ಮೈಸೂರು, ಕಲಬುರಗಿ, ಬೆಳಗಾವಿ ವಲಯಗಳ ೭೦ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜೆಎನ್‌ಎನ್‌ಸಿಇ ವಿದ್ಯಾರ್ಥಿಗಳ ತಂಡ, ನಾಟಕ ಸ್ಪರ್ಧೆಯಲ್ಲಿ ಚಿನ್ನದ ಪದಕ, ಇನ್ಸ್ಟಾಲೇಷನ್ ಸ್ಪರ್ಧೆಯಲ್ಲಿ ಚಿನ್ನದ ಪದಕ, ಏಕಾಂಕ ನಾಟಕದಲ್ಲಿ ಬೆಳ್ಳಿ ಪದಕ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಮಿಮಿಕ್ರಿ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಕಾರ್ಟೂನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, ಜನಪದ ವಾದ್ಯವೃಂದ ಸ್ಪರ್ಧೆ ಯಲ್ಲಿ ಕಂಚು, ತತ್‌ಕ್ಷಣದ ಚಿತ್ರಕಲೆ ಸ್ಪರ್ಧೆಯಲ್ಲಿ ಕಂಚು, ರಂಗೋಲಿ ಸ್ಪರ್ಧೆಯಲ್ಲಿ ಕಂಚು, ಪೋಸ್ಟರ್ ಮೇಕಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ವರದಿ ಪ್ರಜಾ ಶಕ್ತಿ