ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್ ಮತದಾನ ಜಾಗೃತಿ ರಥಕ್ಕೆ ಚಾಲನೆ ನೀಡಿದರು.


ಮತದಾನ ಜಾಗೃತಿ ರಥವು ಜಿಲ್ಲೆಯಲ್ಲಿ ಕಳೆದ ಬಾರಿಯ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಮತದಾನವಾದ 148 ಮತಗಟ್ಟೆಗಳಲ್ಲಿ ಹಾಗೂ ನಗರ ಪ್ರದೇಶದಲ್ಲಿ ಹೆಚ್ಚು ಜನ ಸೇರುವ ಸ್ಥಳಗಳಲ್ಲಿ 10 ದಿನಗಳ ಕಾಲ ಮತದಾನದ ಕುರಿತು ವಿವಿಧ ವಿಡಿಯೋ ಹಾಗೂ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸಲಿದೆ.
ಇದೇ ವೇಳೆ ಜಿಲ್ಲಾಧಿಕಾರಿಗಳು ಚುನಾವಣಾ ಐಕಾನ್‍ಗಳಿಗೆ ಚುನಾವಣಾ ಪ್ರತಿಜ್ಞಾ ವಿಧಿ ಪೋಸ್ಟರ್‍ನ್ನು ನೀಡಿ, ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸಿದರು.


ಈ ವೇಳೆ ಜಿ.ಪಂ ಸಿಪಿಓ ಗಾಯತ್ರಿ, ತಹಶೀಲ್ದಾರ್ ಪ್ರದೀಪ್, ಜಿಲ್ಲಾಡಳಿತ, ಜಿ.ಪಂ ಅಧಿಕಾರಿ, ಸಿಬ್ಬಂದಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಚುನಾವಣಾ ಐಕಾನ್‍ಗಳಾದ ದೀಕ್ಷಿತ್, ಜ್ಯೋತಿ, ಡಾ.ಶುಭ್ರತಾ ಕೆ.ಎಸ್, ನಿವೇದನ್ ನೆಂಪೆ ಪಾಲ್ಗೊಂಡಿದ್ದರು.

ವರದಿ ಪ್ರಜಾ ಶಕ್ತಿ