ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಟೌನ್ ಬಿ.ಹೆಚ್ ರಸ್ತೆಯ ಹರ್ಷ ಆರ್ಕಿಡ್ ನ 2ನೇ ಮಹಡಿಯಲ್ಲಿರುವ ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶದಲ್ಲಿ, ಶ್ರೀ ಬಾಬು ಅಂಜನಪ್ಪ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ಮತ್ತು ಶ್ರೀ ಪ್ರಕಾಶ್ ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಶಿವಮೊಗ್ಗ ರವರ ನೇತೃತ್ವದ, ಶ್ರೀ ತಿಪ್ಪೇಸ್ವಾಮಿ ಪಿಐ ಸಿಇಎನ್ ಪೊಲೀಸ್ ಠಾಣೆ, ಶ್ರೀಶೈಲ ಪಟ್ಟಣ ಶೆಟ್ಟಿ ಪಿಎಸ್ಐ ಡಿಸಿಆರ್. ಬಿ ಶಿವಮೊಗ್ಗ ಮತ್ತು ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಇಸ್ಪೀಟು ಜೂಜಾಟ ಆಡುತ್ತಿದ್ದ ಒಟ್ಟು 19 ಜನ ಆರೋಪಿತರನ್ನು ದಸ್ತಗಿರಿ ಮಾಡಿ, ಜೂಜಾಟದಲ್ಲಿ ಪಣವಾಗಿಟ್ಟಿದ್ದ ಒಟ್ಟು 1,25,850/- ರೂ ನಗದು ಹಣ, ಟೋಕನ್ ಗಳು ಮತ್ತು ಇಸ್ಪೀಟು ಎಲೆಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣಾ ಗುನ್ನೆ ಸಂಖ್ಯೆ 0147/2024 ಕಲಂ 79, 80 ಕೆ.ಪಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವರದಿ ಪ್ರಜಾ ಶಕ್ತಿ