ವಿಶ್ವದ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆ
ಭಾರತವನ್ನ ವಿಶ್ವದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹೇಳಿದರು.
ನಗರದ ಬಂಟರ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳ ಹಾಗೂ ಕಾರ್ಯಕರ್ತರ ಮತ್ತು ಮುಖಂಡರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕಳೆದ ಹತ್ತು ವರ್ಷಗಳ ಹಿಂದೆ ಅತ್ಯಂತ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲಿದ್ದ ಭಾರತ ಇಂದು ಮುಂದುವರಿದ ರಾಷ್ಟ್ರಗಳ ಐದನೇ ಸ್ಥಾನದಲ್ಲಿದೆ ಎಂದು ಹೇಳಿದರು
ಮೋದಿ ಆಡಳಿತ ವೈಖರಿಯಿಂದಾಗಿ ಭಾರತದತ್ತ ಇಂದು ವಿಶ್ವವೇ ನೋಡುವಂತಾಗಿದೆ ಮುಂದಿನ ದಿನಗಳಲ್ಲಿ ಭಾರತ ವಿಶ್ವದ ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಲಿದೆ ಎಂದು ಹೇಳಿದರು.


ಕೇಂದ್ರ ಸರ್ಕಾರ ಅಂತ್ಯದ ಪರಿಕಲ್ಪನೆ ಅಡಿಯಲ್ಲಿ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದವರನ್ನ ಗಮನದಲ್ಲಿರಿಸಿಕೊಂಡು ಹಲವಾರು ಯೋಜನೆಗಳನ್ನ ಜಾರಿಗೆ ತರಲಾಗಿದೆ ಇದರಿಂದಾಗಿ ಬಡತನ ರೇಖೆಗಿಂತ ಕೆಳಗಿರುವವರ ಸಂಖ್ಯೆ ಕಡಿಮೆಯಾಗಿದೆ ಇದು ಮೋದಿ ಸರ್ಕಾರದ ಸಾಧನೆ ಎಂದು ಹೇಳಿದರು.
ಅಭಿವೃದ್ಧಿಯನ್ನ ದೃಷ್ಟಿಯಲ್ಲಿ ಇಟ್ಟುಕೊಂಡು ನನ್ನ ಸಂಸದನ ಅವಧಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ತಂದಂತಹ ನೂರಾರು ಅಭಿವೃದ್ಧಿ ಕಾರ್ಯಗಳಿಂದಾಗಿ ಇಂದು ಜಿಲ್ಲೆಯಲ್ಲಿ ಬಂಡವಾಳ ಶಾಹಿಗಳು ಬಂಡವಾಳವನ್ನ ಹೂಡಿಕೆ ಮಾಡಲು ಮುಂದೆ ಬರುವಂತಾಗಿದೆ ಇದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದೆ ಮುಂದಿನ ದಿನಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತದಾರರು ನನ್ನನ್ನ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸುವ ಮೂಲಕ ಮತ್ತಷ್ಟು ಕೆಲಸ ಮಾಡಲು ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.


ಹೇಳದೆ ಮಾಡುವವನು ರೂಢಿ ಒಳಗ ಉತ್ತಮನು ಹೇಳಿ ಮಾಡುವವನು ಮಾಧ್ಯಮನು ಹೇಳಿ ಮಾಡದವನು ಅರಮನು ಎಂಬ ಹಿರಿಯರ ಮಾತಿನಂತೆ ಯಾವುದನ್ನು ಹೇಳದೆ ಮಾಡಿ ತೋರಿಸುವ ಸ್ವಭಾವ ನನ್ನದು ಆ ರೀತಿ ಮುಂದಿನ ದಿನಗಳಲ್ಲಿಯೂ ಕೂಡ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಹೊಸ ಹೊಸ ಯೋಜನೆಗಳನ್ನ ಶಿವಮೊಗ್ಗ ಜಿಲ್ಲೆಗೆ ತರುವ ಮೂಲಕ ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಗ್ರಾಮಾಂತರ ಶಾಸಕಿ ಶಾರದಾಪುರ ನಾಯ್ಕ್, ಶಿವಮೊಗ್ಗ ನಗರ ಶಾಸಕ ಎಸ್ ಎನ್ ಚನ್ನಬಸಪ್ಪ ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕೆಬಿ ಅಶೋಕ್ ನಾಯ್ಕ್ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಬಾನು ಪ್ರಸಾದ್ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಧನಂಜಯ ಸರ್ಜಿ ವಿರೂಪಾಕ್ಷಪ್ಪ ಮಲ್ಲೇಶಪ್ಪ ಸುರೇಶ್ ಉಪಸ್ಥಿತರಿದ್ದರು

ವರದಿ ಪ್ರಜಾ ಶಕ್ತಿ