ಭದ್ರಾವತಿ ತಾಲೂಕು ಬಾರಂದೂರು ಮತ್ತು ಮಾವಿನಕೆರೆ ಕಾಲೋನಿಯಲ್ಲಿ 35 ಲಕ್ಷ ವೆಚ್ಚದ ಸಿ.ಸಿ ರಸ್ತೆ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಭದ್ರಾವತಿಯ ಮಾನ್ಯ ಜನಪ್ರಿಯ ಶಾಸಕರಾದ ಶ್ರೀ ಬಿ.ಕೆ ಸಂಗಮೇಶ್ವರ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಬಾರಂದೂರು ಮಾವಿನಕೆರೆ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ವತಿಯಿಂದ ಮಾನ್ಯ ಶಾಸಕರನ್ನು ಸನ್ಮಾನಿಸಲಾಯಿತು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153