ಭದ್ರಾವತಿ ನಗರದ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದ ಕಡೆಗೆ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ ಕೆ
ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಹಾಗೂ ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ನಾಗರಾಜ್ ಪೊಲೀಸ್ ಉಪಾಧೀಕ್ಷಕರು ಭದ್ರಾವತಿ, ಉಪ ವಿಭಾಗ ಮತ್ತು ಶ್ರೀ ಶ್ರೀಶೈಲ ಕುಮಾರ್ ಪೊಲೀಸ್ ವೃತ್ತ ನಿರೀಕ್ಷಕರು ಭದ್ರಾವತಿ ನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಕೃಷ್ಣ ಕುಮಾರ್ ಬಿ ಮಾನೆ ಪೋಲಿಸ್ ಉಪನಿರೀಕ್ಷಕರು ಹೊಸಮನೆ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಹುಸೇನ್ ಬಿ, 35 ವರ್ಷ, ಸತ್ಯಸಾಯಿ ನಗರ ಭದ್ರಾವತಿ ಟೌನ್ ಈಕೆಯನ್ನು ವಶಕ್ಕೆ ಪಡೆದು ಅಂದಾಜು ಮೌಲ್ಯ 4,50,000 /- ರೂ ಗಳ 7ಕೆಜಿ 590 ಗ್ರಾಂ ಒಣ ಗಾಂಜಾವನ್ನು ಅಮಾನತುಪಡಿಸಿಕೊಂಡು, ಆರೋಪಿತಳ ವಿರುದ್ಧ ಹೊಸಮನೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0072/2024 ಕಲಂ 20 (ಬಿ) ii (ಬಿ) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.