ಸಸಿಗಳನ್ನು ನೆಡುವುದರ ಜತೆಯಲ್ಲಿ ಅವುಗಳ ಪಾಲನೆ ಹಾಗೂ ಪೋಷಣೆ ಬಗ್ಗೆಯೂ ಪ್ರಾಮುಖ್ಯತೆ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ತಿಳಿಸಿದರು.
ಕೃಷಿನಗರದಲ್ಲಿ ಇನ್ನರ್‌ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಹಾಘೂ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ಪರಿಸರ ಮಾಲಿನ್ಯ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಎಲ್ಲರ ಪ್ರಯತ್ನವು ಮುಖ್ಯ. ಈಗ ಆಗುತ್ತಿರುವ ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ವಹಿಸಬೇಕು.
ಉತ್ತಮ ಪರಿಸರ ನಿರ್ಮಾಣ ಮಾಡುವ ದೃಷ್ಠಿಯಿಂದ ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಅವುಗಳ ಪಾಲನೆ ಪೋಷಣೆಯನ್ನು ನಿರಂತರ ಮಾಡಬೇಕು. ಪ್ರತಿಯೊಬ್ಬರು ಒಂದೊದು ಗಿಡ ನೆಟ್ಟು ಅದರ ಜವಾಬ್ದಾರಿಯನ್ನು ವಹಿಸಿಕೊಂಡು ಪೋಷಿಸಬೇಕು. ಇದರಿಂದ ಉತ್ತಮ ಪರಿಸರ ಇರುವಾ ವಾತಾವರಣ ನಿರ್ಮಾಣ ಸಾಧ್ಯ.
ಗಿಡ ಮರಗಳ ನಾಶ ಆಗುವುದನ್ನು ತಪ್ಪಿಸಬೇಕಿದೆ. ಪ್ಲಾಸ್ಟಿಕ್ ಬಳಕೆಯಿಂದ ಹೆಚ್ಚು ಪರಿಸರ ಮಾಲಿನ್ಯ ಆಗುತ್ತಿರುವುದರಿಂದ ಪ್ಲಾಸ್ಟಿಕ್ ಉಪಯೋಗಿಸುವುದನ್ನು ತಡೆಗಟ್ಟಬೇಕಿದೆ. ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿಟ್ಟುಕೊಳ್ಳಲು ಆಯಾ ಪ್ರದೇಶಗಳಲ್ಲಿ ಸ್ಥಳೀಯ ಬಡಾವಣೆಗಳ ಜನರು ಆಸಕ್ತಿ ವಹಿಸಬೇಕು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವದ ಅಧ್ಯಕ್ಷೆ ಜಯಂತಿ ವಾಲಿ ಮಾತನಾಡಿ, ಇನ್ನರ್‌ವ್ಹೀಲ್ ಕ್ಲಬ್‌ನಿಂದ ಮುಂದಿನ ದಿನಗಳಲ್ಲಿ ಪರಿಸರದ ಬಗ್ಗೆ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಮಹಿಳೆಯರು ಸಂಘ ಸಂಸ್ಥೆಗಳಲ್ಲಿ ಮುಖ್ಯಪಾತ್ರ ವಹಿಸಿ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಯದರ್ಶಿ ಬಿಂದು ವಿಜಯ್‌ಕುಮಾರ್ ವಹಿಸಿದ್ದರು. ಮಾಜಿ ಅಧ್ಯಕ್ಷೆ ಶಬರಿ ಕಡಿದಾಳ, ವೀಣಾ ಹರ್ಷ, ರಾಜೇಶ್ವರಿ ಪ್ರತಾಪ್, ವಿಜಯಾ ರಾಯ್ಕರ್, ವೀಣಾ ಸುರೇಶ್, ವಾಣಿ ಪ್ರವೀಣ್, ಸುನಂದಾ ಜಗದೀಶ್, ಉಮಾ ವೆಂಕಟೇಶ್, ಜ್ಯೋತಿ ಸುಬ್ಬೇಗೌಡ, ಮಧುರಾ ಮಹೇಶ್, ಜಿ.ವಿಜಯ್‌ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್‌ರಾವ್ ಕದಂ, ಕಾರ್ಯದರ್ಶಿ ಸತೀಶ್‌ಚಂದ್ರ, ಮಮತಾ ಸುಧೀಂದ್ರ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153