ಜಿಲ್ಲಾ ಜಾತ್ಯತೀತ ಜನತಾದಳ ಇಂದು ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಪಾಲ್ಗೊಂಡು ಸಭಾ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಪರಿಣಾಮ ಎಲ್ಲೆಡೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಮೊದಲ ಹಂತದಲ್ಲಿ ನಡೆದಿರುವ 14 ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆಯಲ್ಲಿ ಮತದಾರ ಬಾಂಧವರು ಅತ್ಯುತ್ಸಾಹದಿಂದ ಪಾಲ್ಗೊಂಡು ರಾಜ್ಯದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ದಾಖಲಿಸುವ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಲಾಯಿತು.

ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿಯು ಉತ್ತಮ ಸಮನ್ವಯ ಸಾಧಿಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಹಾಗೂ ನನ್ನ ಲೋಕಸಭಾ ಅವಧಿಯಲ್ಲಿ ಅನುಷ್ಠಾನಕ್ಕೆ ತಂದಿರುವ ಯೋಜನೆಗಳ ಬಗ್ಗೆ ಮನೆಮನೆಗೆ ತೆರಳಿ ಕರಪತ್ರ ಹಂಚುವ ಮೂಲಕ ಜಿಲ್ಲೆಯಾದ್ಯಂತ ಪ್ರಚಾರ ಕಾರ್ಯದಲ್ಲಿ ನಿರತವಾಗಿ ಮತದಾರರ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ.

ಬರುವ ಮೇ 7 ರಂದು ಕ್ರಮ ಸಂಖ್ಯೆ 2ರ ಕಮಲದ ಗುರುತಿಗೆ ಶ್ರೀಸಾಮಾನ್ಯನ ಅತ್ಯಮೂಲ್ಯ ಮತವನ್ನು ಕೊಡಿಸುವ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸಿನ ವಿಶ್ವಗುರು ಭಾರತ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ಅತ್ಯಧಿಕ ಮತಗಳ ಅಂತರದಿಂದ ದಿಗ್ವಿಜಯ ಸಾಧಿಸುವಂತೆ ಕಾರ್ಯನಿರ್ವಹಿಸಲು ಕರೆಕೊಡಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಕಡಿದಾಳ್ ಗೋಪಾಲ್ ಅವರು, ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ಅವರು, ಮುಖಂಡರಾದ ಶ್ರೀ ದೀಪಕ್ ಸಿಂಗ್ ಅವರು, ಶ್ರೀ ಪ್ರಸನ್ನ ಕುಮಾರ್ ಅವರು, ಶ್ರೀಮತಿ ಶಾರದ ಅಪ್ಪಾಜಿಗೌಡ ಅವರು, ಶ್ರೀ ರಾಮಕೃಷ್ಣ ಅವರು ಸೇರಿದಂತೆ ಇನ್ನು ಅನೇಕ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ