ದೇಶದಲ್ಲಿ ಮತ್ತು ರಾಜ್ಯದಲ್ಲಿ ಯಶಸ್ವಿಯಾಗಿ ಕರೋನ ಲಸಿಕಾ ಅಭಿಯಾನ ನಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಬಹುತೇಕ ಮೊದಲನೇ ಹಂತದ ಲಸಿಕಾಕರಣ ಆಗಿದೆ. ಈ ನಿಟ್ಟಿನಲ್ಲಿ ಎ.ಬಿ.ವಿ.ಪಿ ವಿದ್ಯಾರ್ಥಿ ಸಮುದಾಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತದೆ. ಹಲವಾರು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಿರುವುದರಿಂದ ಈಗಾಗಲೇ ಕೋವ್ಯಾಕ್ಸಿನ್ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ಎರಡನೇ ಡೋಸ್ ನ ಲಸಿಕೆ ತಗೆದುಕೊಳ್ಳುವ ಅವಧಿ ಬಂದಿರುತ್ತದೆ. ಆದ್ದರಿಂದ ಈ ಲಸಿಕೆಯ ಎರಡನೇ ಡೋಸ್ ಒದಗಿಸಲು ಆಯಾ ಕಾಲೇಜುಗಳಲ್ಲಿ ಲಸಿಕಾ ಅಭಿಯಾನ ಮಾಡಬೇಕು.
ಇದಷ್ಟೇ ಅಲ್ಲದೆ ಸಂಶೋಧನಾ ವಿದ್ಯಾರ್ಥಿಗಳ ಪ್ರೋತ್ಸಾಹ ಧನ (STIPEND) ಕಳೆದ ಒಂಬತ್ತು ತಿಂಗಳುಗಳಿಂದ ಬಿಡುಗಡೆಯಾಗದೇ ಇರುವುದರಿಂದ ವಿದ್ಯಾರ್ಥಿಗಳು ತೊಂದರೆ ಎದುರಿಸುವಂತಾಗಿದೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಗಳ ಜೊತೆ ಮಾತನಾಡಿ ಬಾಕಿ ಇರುವ ಪ್ರೋತ್ಸಾಹಧನ (ಸ್ಟೈಪೆಂಡ್) ವನ್ನು ಆದಷ್ಟು ಬೇಗನೇ ಬಿಡುಗಡೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ), ಶಿವಮೊಗ್ಗ ಜಿಲ್ಲಾ ಘಟಕವು ತಮ್ಮನ್ನು ಆಗ್ರಹಿಸುತ್ತದೆ.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153