ನಮಗೆ ದೇಶದ ವಿಷನ್ ಚಿಂತೆ ಆದರೆ ವಿರೋಧ ಪಕ್ಷಗಳಿಗೆ ಕಮಿಷನ್ ಚಿಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಹೇಳಿದರು.
ನಗರದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್‌ಷನ್ ಹಾಲ್‌ನಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶ ಆಯೋಜಿಸಿದ್ದ ಅವರು, ಬಿಜೆಪಿ ಮತ್ತು ಮೈತ್ರಿ ಪಕ್ಷದ ಕೂಟಗಳಿಗೆ ದೇಶದ ಬಗ್ಗೆ ದೂರದೃಷ್ಟಿಯ ಚಿಂತೆ ಹಾಗೂ ಚಿಂತನೆ ಇದೆ. ಆದರೆ ವಿರೋಧ ಪಕ್ಷಗಳಿಗೆ ಇದ್ಯಾವುದೂ ಇಲ್ಲ. ಅವರಿಗೆ ಕೇವಲ ಕಮಿಷನ್ ಚಿಂತೆ ಎಂದರು.


ಬಿಜೆಪಿ ಇಡೀ ದೇಶವನ್ನು ಅಖಂಡ ಭಾರತವಾಗಿ ನಿರ್ಮಿಸುತ್ತಿದೆ. ಆದರೆ ಇಂಡಿಯಾ ಒಕ್ಕೂಟ ದೇಶವನ್ನು ಇಬ್ಬಾಗ ಮಾಡುತ್ತಿದೆ. ತೆರಿಗೆಯ ವಿಷಯದಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತ ಎಂದು ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದು ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯೋತ್ಸವದ ಭಾಷಣದ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪು ರವರ ಕವಿತೆಯ ಸಾಲುಗಳನ್ನು ಉಲ್ಲೇಖ ಮಾಡಿದರು. ಇದು ಭಾರತದ ಏಕತೆಯನ್ನು ತೋರಿಸುತ್ತದೆ ಎಂದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಳೆದ ೧೦ ವರ್ಷಗಳ ಈಚೆಗೆ ರಾಷ್ಟ್ರವನ್ನು ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿಗೆ ತಂದಿದ್ದಾರೆ ಎಂದರು.


ಉಜ್ವಲ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ತಾಯಂದಿರು ಗ್ಯಾಸ್ ಸಂಪರ್ಕವನ್ನು ಪಡೆಯುವ ಮೂಲಕ ಉತ್ತಮ ಜೀವನವನ್ನು ಮಾಡುತ್ತಿದ್ದಾರೆ. ೧೨ ಕೋಟಿ ಶೌಚಾಲಯವನ್ನು ನಿರ್ಮಿಸಿಕೊಡುವ ಮೂಲಕ ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಮಹಿಳೆಯರು ಗೌರವಯುತವಾದ ಜೀವನ ನಿರ್ವಹಿಸುವಂತೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದು ಹೇಳಿದರು.
೭೦ ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ ೫ ಲಕ್ಷ ರೂ.ಗಳ ಆರೋಗ್ಯ ವಿಮಾ ಸೌಲಭ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದಾರೆ. ಇದರೊಂದಿಗೆ ರಿಕ್ಷಾ ಚಾಲಕ , ಟ್ರಕ್, ಬಸ್, ಚಾಲಕ ಹಾಗೂ ಕ್ಲೀನರ್ ಜಟ್ಕಾವಾಲಾ ಹೀಗೆ ಸಮಾಜದ ವಿವಿಧ ಹಂತಗಳಲ್ಲಿ ದುಡಿಯುತ್ತಿರುವ ಅನೇಕ ಉದ್ಯೋಗಿಗಳಿಗೆ ಆರೋಗ್ಯ ವಿಮೆ ಸೌಲಭ್ಯನವನ್ನು ಕಲ್ಪಿಸುವ ಮೂಲಕ ಸಮುದಾಯಕ್ಕೆ ಆರೋಗ್ಯ ಭದ್ರತೆಯನ್ನು ನೀಡಿದ್ದಾರೆ ಎಂದರು.


ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ರುದ್ರೇಗೌಡ, ಭಾರತಿ ಶೆಟ್ಟಿ, ಶಾರದಾ ಪೂರ‍್ಯನಾಯ್ಕ್, ಮಾಜಿ ಶಾಸಕರಾದ ಕುಮಾರ ಬಂಗಾರಪ್ಪ, ಹರತಾಳು ಹಾಲಪ್ಪ, ಕೆ.ಬಿ.ಅಶೋಕ್ ನಾಯ್ಕ್, ಡಾ. ರಾಜನಂದಿನಿ , ಕುಮಾರಿ ಮಂಜುಳಾ, ಕೆ.ಜಿ.ಕುಮಾರಸ್ವಾಮಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.


ಅತ್ಯಂತ ಕ್ರಿಯಾಶೀಲ ಸಂಸದರಾಗಿರುವ ಬಿ.ವೈ.ರಾಘವೇಂದ್ರ ಸಂಸತ್ತಿನಲ್ಲಿ ಉತ್ತಮ ಚರ್ಚೆ ಮಾಡುತ್ತಾರೆ. ಅಲ್ಲದೇ ಕ್ಷೇತ್ರಕ್ಕೆ ಆಗಬೇಕಾಗಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಸರ್ಕಾರದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಮಾದರಿ ಸಂಸದರಾಗಿ ಹೊರಹೊಮ್ಮಿದ್ದು, ಮತ್ತೊಮ್ಮೆ ಲೋಕಸಭೆಗೆ ಇವರನ್ನು ಆಯ್ಕೆಮಾಡಿ ಕಳುಹಿಸಿಕೊಡಬೇಕು.


-ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ…


ರಾಜ್ಯ ಸರ್ಕಾರಿ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ಬರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಎಲ್ಲದಕ್ಕೂ ಕೇಂದ್ರದ ಕಡೆ ಬೆಟ್ಟು ತೋರಿಸುವ ಸಂಸ್ಕೃತಿ ಸರಿಯಲ್ಲ ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು.
-ಬಿ.ಎಸ್.ಯಡಿಯೂರಪ್ಪ , ಮಾಜಿ ಮುಖ್ಯಮಂತ್ರಿ


ಮೋದಿ ಸರ್ಕಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರದ ಪ್ರತಿಯೊಬ್ಬ ಪ್ರಜೆ ಸ್ವಾಭಿಮಾನದಿಂದ ಸ್ವಾವಲಂಬಿಯಾಗಿ ಬದುಕುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ನಾನು ನಡೆಸಿದ ಪ್ರಯತ್ನಕ್ಕೆ ಮೋದಿ ಸರ್ಕಾರ ಹಾಗೂ ಈ ಹಿಂದೆ ರಾಜ್ಯದಲ್ಲ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಅತ್ಯತ್ತಮವಾಗಿ ಸ್ಪಂದಿಸಿದೆ. ಇದರ ಪರಿಣಾಮವಾಗಿ ವಿಮಾನ ನಿಲ್ದಾಣ,ರೈಲ್ವೇ ಯೋಜನೆಗಳು ರಾಷ್ಟ್ರೀಯ ಹೆದ್ದಾರಿಗಳೂ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ದಿ , ನೀರಾವತಿ ಯೋಜನೆಗಳು ಹೀಗೆ ಹಲವಾರು ಕಾರ್ಯಗಳು ಆಗಿವೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕೆಲಸ ಮಾಡಲು ನಿಮ್ಮ ಮತವನ್ನು ಕಮಲದ ಗುರುತಿಗೆ ನೀಡುವ ಮೂಲಕ ಮೋದಿಯವರನ್ನು ಬೆಂಬಲಿಸಬೇಕು.
-ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿ

ವರದಿ ಪ್ರಜಾ ಶಕ್ತಿ