ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗುರುತಾದ ಕಮಲದ ಹೂವಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.
ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಬ್ರಾಹ್ಮಣ ಸಮಾಜದ ವಿಶೇಷ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಶ್ವಗುರು ಭಾರತವನ್ನು ನಿರ್ಮಾಣಮಾಡಲು ಹೆಚ್ಚಿನ ಬೆಂಬಲದ ಅವಶ್ಯಕತೆ ಇದ್ದು, ಮೇ ೭ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಗುರುತಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.


ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನನ್ನ ಸಂಸದನ ಅವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ರೈಲ್ವೇ ಕ್ಷೇತ್ರ,ಮ ವಿಮಾನ ಯಾನ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ದಿ, ಪ್ರವಾಸೋದ್ಯಮಗಳಿಗೆ ಹೆಚ್ಚಿನ ಆದ್ಯತೆ, ಜೋಗ ಮತ್ತು ಕೊಡಚಾದ್ರಿಯಲ್ಲಿ ಕೇಬಲ್ ಕಾರ್ ಅಳವಡಿಕೆ ಹೀಗೆ ನೂರಾರು ಕಾರ್ಯಕ್ರಮಗಳು ಜನಸಾಮಾನ್ಯರಿಗಾಗಿ ಮಾಡಿದ್ದೇನೆ. ಇನ್ನೂ ಅನೇಕ ಯೋಜನೆಗಳು ನನ್ನ ಕಣ್ಣುಮುಂದೆ ಇದೆ. ಅವುಗಳ ಅನುಷ್ಟಾನಕ್ಕೆ ಮತ್ತೊಂದು ಅವಧಿಗೆ ಸಂಸದನಾಗುವ ಅಗತ್ಯವಿದೆ. ಆದ್ದರಿಂದ ಕ್ರಮ ಸಂಖ್ಯೆ ೨ರ ಕಮಲದ ಗುರುತಿಗೆ ಮತವನ್ನು ನೀಡುವ ಮೂಲಕ ಭಾರೀ ಬಹುಮತದೊಂದಿಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಶ್ರೀ ವಾತ್ಸವ್, ಮಾಜಿ ಶಾಸಕ ಪ್ರಸನ್ನಕುಮಾರ್, ಮುಖಂಡರಾದ ದತ್ತಾತ್ರಿ, ನೆ.ಲ.ನರೆಂದ್ರ ಬಾಬು, ಸುಂದರರಾಜ್, ರಾಘವೇಂದ್ರ ಉಡುಪ ಇತರರು ಉಪಸ್ಥಿತರಿದ್ದರು.

ವರದಿ ಪ್ರಜಾ ಶಕ್ತಿ